1 Kings 22:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷಾಫಾಟನು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ನಂತರ ಅವನ ಮಗನಾದ ಯೆಹೋರಾಮನು ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
Kannada BSI Bible 2016
ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
Kannada Bible (KNCL) BSI 2016
ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.