1 Kings 22:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಜ್ಯನು ಅಹಾಬನ ಮಗ. ಯೆಹೋಷಾಫಾಟನು ಯೆಹೂದದ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಅವನು ಇಸ್ರೇಲಿನ ರಾಜನಾದನು. ಅಹಜ್ಯನು ಸಮಾರ್ಯದಲ್ಲಿ ಎರಡು ವರ್ಷ ರಾಜ್ಯವಾಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
Kannada BSI Bible 2016
ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬವನು ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.
Kannada Bible (KNCL) BSI 2016
ಯೆಹೂದ್ಯರ ಅರಸ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗ ಅಹಜ್ಯ ಎಂಬುವನು ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು.