1 Kings 22:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
Kannada BSI Bible 2016
ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ಯರ ದೇವರಾದ ಯೆಹೋವನನ್ನು ರೇಗಿಸಿದನು.
Kannada Bible (KNCL) BSI 2016
ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.