1 Kings 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
Kannada BSI Bible 2016
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.
Kannada Bible (KNCL) BSI 2016
ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.