1 Kings 22:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳು ಇಲ್ಲಿ ಬೇರೆ ಯಾರಾದರೂ ಇದ್ದಾರೆಯೇ? ಯಾರಾದರೂ ಇದ್ದರೆ, ದೇವರು ಏನು ಹೇಳುತ್ತಾನೆಂಬುದನ್ನು ನಾವು ಅವರನ್ನು ಕೇಳೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
Kannada BSI Bible 2016
ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -
Kannada Bible (KNCL) BSI 2016
ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.