1 Kings 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
Kannada BSI Bible 2016
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ
Kannada Bible (KNCL) BSI 2016
ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,