1 Kings 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಸ್ತ್ರೀಯು, “ಸ್ವಾಮಿ, ನಾನು ಮತ್ತು ಈ ಸ್ತ್ರೀಯು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಾವಿಬ್ಬರೂ ಗರ್ಭಿಣಿಯರಾಗಿದ್ದೆವು ಮತ್ತು ನಮ್ಮ ಮಕ್ಕಳಿಗೆ ಜನ್ಮಕೊಡಲು ಸಿದ್ಧರಾಗಿದ್ದೆವು. ಅವಳು ನನ್ನ ಹತ್ತಿರ ಇದ್ದಾಗ ನಾನು ನನ್ನ ಮಗುವಿಗೆ ಜನ್ಮನೀಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
Kannada BSI Bible 2016
ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಒಬ್ಬಳು ಅರಸನಿಗೆ - ನನ್ನ ಒಡೆಯಾ, ಕೇಳು; ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
Kannada Bible (KNCL) BSI 2016
ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.