1 Kings 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
Kannada BSI Bible 2016
ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.
Kannada Bible (KNCL) BSI 2016
ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.