1 Kings 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ” ಎಂದು ಹೇಳಿದಳು.
Kannada BSI Bible 2016
ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆ ಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ ಎಂದು ಹೇಳಿದಳು.
Kannada Bible (KNCL) BSI 2016
ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.