1 Kings 4:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.
Kannada BSI Bible 2016
ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್‌ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದ ಉರೀಯ ಮಗನಾದ ಗೆಬೆರ್ ಇವರೇ.
Kannada Bible (KNCL) BSI 2016
ಉರಿಯನ ಮಗ ಗೆಬೆರ್ - ಗಿಲ್ಯಾದ (ಅಮೋರಿಯರ ಅರಸ ಸೀಹೋನ್, ಬಾಷಾನಿನ ಅರಸ ಓಗ್ ಇವರ ಪ್ರದೇಶ) ಪ್ರದೇಶಕ್ಕೆಲ್ಲಾ ಅವನೊಬ್ಬನೇ ಜಿಲ್ಲಾಧಿಕಾರಿಯಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು.