1 Kings 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
Kannada BSI Bible 2016
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.
Kannada Bible (KNCL) BSI 2016
ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.