1 Kings 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
Kannada BSI Bible 2016
ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.
Kannada Bible (KNCL) BSI 2016
ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.