1 Kings 4:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
Kannada BSI Bible 2016
ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
Kannada Bible (KNCL) BSI 2016
ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.