1 Kings 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
Kannada BSI Bible 2016
ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
Kannada Bible (KNCL) BSI 2016
ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.