1 Kings 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
Kannada BSI Bible 2016
ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
Kannada Bible (KNCL) BSI 2016
ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.