1 Kings 5:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
Kannada BSI Bible 2016
ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡಕಲ್ಲುಗಳನ್ನು ಕೊರೆಯುತ್ತಿದ್ದರು.
Kannada Bible (KNCL) BSI 2016
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.