1 Kings 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
Kannada BSI Bible 2016
ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.
Kannada Bible (KNCL) BSI 2016
ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.