1 Kings 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
Kannada BSI Bible 2016
ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.
Kannada Bible (KNCL) BSI 2016
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.