1 Kings 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
Kannada BSI Bible 2016
ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
Kannada Bible (KNCL) BSI 2016
ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.