1 Kings 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.