1 Kings 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.
Kannada Bible (KNCL) BSI 2016
ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.