1 Kings 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.
Kannada BSI Bible 2016
ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸಂಬಂಧಿಸಲ್ಪಟ್ಟಿದ್ದವು.
Kannada Bible (KNCL) BSI 2016
ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.