1 Kings 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸೊಲೊಮೋನನಿಗೆ, “ನನ್ನ ಎಲ್ಲಾ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ನೀನು ವಿಧೇಯನಾಗಿದ್ದರೆ, ನಿನ್ನ ತಂದೆಯಾದ ದಾವೀದನಿಗೆ ನಾನು ವಾಗ್ದಾನ ಮಾಡಿದವುಗಳನ್ನು ನಿನಗಾಗಿ ಈಡೇರಿಸುತ್ತೇನೆ. (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.
Kannada BSI Bible 2016
ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೊಲೊಮೋನನಿಗೆ - ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುತ್ತೀಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವದಾದರೆ ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಸೊಲೊಮೋನನಿಗೆ, “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವೆ. ನನ್ನ ನಿಯಮವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಗೊಂಡು, ನೀನು ನಡೆಯುವುದಾದರೆ, ನಿನ್ನನ್ನು ಕುರಿತು ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು,