1 Kings 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
Kannada BSI Bible 2016
ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಿಗೆಗಳನ್ನು ಹಾಕಿಸಿದನು.
Kannada Bible (KNCL) BSI 2016
ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು.