1 Kings 6:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
Kannada BSI Bible 2016
ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಿಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.
Kannada Bible (KNCL) BSI 2016
ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು.