1 Kings 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
Kannada BSI Bible 2016
ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವದಕ್ಕೋಸ್ಕರ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ‘ಗರ್ಭಗುಡಿ’ ಎಂದು ಪ್ರತ್ಯೇಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.