1 Kings 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಈ ಕೊಠಡಿಗೆ ಹೊದಿಸಿದನು. ಈ ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ಆ ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಣಿಗಳನ್ನೂ ಜೋಡಿಸಿದನು. ಆ ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಆ ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
Kannada BSI Bible 2016
ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಬಂಗಾರದ ತಗಡಿನಿಂದ ಹೊದಿಸಲ್ಪಟ್ಟ ಮಹಾಪರಿಶುದ್ಧಸ್ಥಳದ ಎದುರಿನಲ್ಲಿ ಒಂದು ಗೋಡೆಯಿಂದ ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
Kannada Bible (KNCL) BSI 2016
ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು. ಬಂಗಾರದ ತಗಡಿನಿಂದ ಹೊದಿಸಲಾಗಿದ್ದ ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯಿಂದ ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಆಲಯದ ಒಳಭಾಗವನ್ನು ಶುದ್ಧ ಬಂಗಾರದಿಂದ ಹೊದಿಸಿ, ದೈವೋಕ್ತಿಯ ಸ್ಥಾನದ ಮುಂದೆ ಬಂಗಾರದ ಸರಪಣಿಗಳಿಂದ ವಿಭಾಗವನ್ನು ಮಾಡಿ, ಅದನ್ನು ಬಂಗಾರದಿಂದ ಹೊದಿಸಿದನು.