1 Kings 6:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
Kannada BSI Bible 2016
ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಎಣ್ಣೇಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಗರ್ಭಗೃಹದಲ್ಲಿಡಿಸಿದನು.
Kannada Bible (KNCL) BSI 2016
ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೈವೋಕ್ತಿಯ ಸ್ಥಾನದಲ್ಲಿ ಹಿಪ್ಪೇಮರಗಳಿಂದ ಎರಡು ಕೆರೂಬಿಗಳನ್ನು ಮಾಡಿಸಿದನು. ಒಂದೊಂದು 4.4 ಮೀಟರ್ ಎತ್ತರವಾಗಿತ್ತು.