1 Kings 6:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯ ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯ ಎತ್ತರ ಹದಿನೈದು ಅಡಿಗಳು. (Verses 24-26)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
Kannada BSI Bible 2016
ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ ಹತ್ತು ಮೊಳ.
Kannada Bible (KNCL) BSI 2016
ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.