1 Kings 6:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
Kannada BSI Bible 2016
ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
Kannada Bible (KNCL) BSI 2016
ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು.