1 Kings 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.
Kannada BSI Bible 2016
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.
Kannada Bible (KNCL) BSI 2016
ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್.