1 Kings 6:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.
Kannada BSI Bible 2016
ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗರ್ಭಗೃಹದ ಬಾಗಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು.
Kannada Bible (KNCL) BSI 2016
ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.