1 Kings 6:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
Kannada BSI Bible 2016
ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೌಕಟ್ಟು ಪಂಚಕೋಣಗಳುಳ್ಳದಾಗಿತ್ತು. ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.
Kannada Bible (KNCL) BSI 2016
ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು.