1 Kings 6:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
Kannada BSI Bible 2016
ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.
Kannada Bible (KNCL) BSI 2016
ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.