1 Kings 6:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ವರ್ಷದ ಎರಡನೆಯ ತಿಂಗಳಿನ ಜೀವ್ (ವೈಶಾಖ) ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.
Kannada BSI Bible 2016
ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.
Kannada Bible (KNCL) BSI 2016
ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯ ವರ್ಷದ ಜಿವ್ ತಿಂಗಳಲ್ಲಿ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾಯಿತು.