1 Kings 6:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
Kannada BSI Bible 2016
ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು.
Kannada Bible (KNCL) BSI 2016
ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.