1 Kings 6:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
Kannada BSI Bible 2016
ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.
Kannada Bible (KNCL) BSI 2016
ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.