1 Kings 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.
Kannada BSI Bible 2016
ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.
Kannada Bible (KNCL) BSI 2016
ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.