1 Kings 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.
Kannada BSI Bible 2016
ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು.
Kannada Bible (KNCL) BSI 2016
ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು.