1 Kings 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
Kannada BSI Bible 2016
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.
Kannada Bible (KNCL) BSI 2016
ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.