1 Kings 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
Kannada BSI Bible 2016
ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು.
Kannada Bible (KNCL) BSI 2016
ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು.