1 Kings 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
Kannada BSI Bible 2016
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.
Kannada Bible (KNCL) BSI 2016
ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.