1 Kings 7:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
Kannada BSI Bible 2016
ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬತ್ ನೀರನ್ನು ಹಿಡಿಯುವದು.
Kannada Bible (KNCL) BSI 2016
ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.