1 Kings 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ಆ ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರ ಕಂಬಗಳಿದ್ದವು. ಈ ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
Kannada BSI Bible 2016
ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣಚಿತ್ರಗಳಿದ್ದವು.
Kannada Bible (KNCL) BSI 2016
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಿನ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಿನ ನೀರಿನ ಬಾನೆಯನ್ನು ಹಿಡಿಯುತ್ತಿದ್ದವು. ಅವುಗಳ ಹೊರ ಮೈಗೆ ತೋರಣಚಿತ್ರಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು.