1 Kings 7:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
Kannada BSI Bible 2016
ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
Kannada Bible (KNCL) BSI 2016
ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.