1 Kings 7:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ಆ ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
Kannada BSI Bible 2016
ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
Kannada Bible (KNCL) BSI 2016
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಕಂಚಿನ ಕಡಲನ್ನು ದೇವಾಲಯದ ಬಲಗಡೆಯಲ್ಲಿ, ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು.