1 Kings 7:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.
Kannada BSI Bible 2016
ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿದನು.
Kannada Bible (KNCL) BSI 2016
ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.