1 Kings 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಎಲ್ಲಾ ಕಟ್ಟಡಗಳನ್ನು ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಈ ಕಲ್ಲುಗಳನ್ನು ಸರಿಯಾದ ಅಳತೆಗೆ ಗರಗಸದಿಂದ ಕತ್ತರಿಸಿದನು. ಅವುಗಳನ್ನು ಮುಂದುಗಡೆ ಮತ್ತು ಹಿಂದುಗಡೆ ಸಮನಾಗಿ ಕತ್ತರಿಸಿದ್ದನು. ಶ್ರೇಷ್ಠವಾದ ಈ ಕಲ್ಲುಗಳು ಅಡಿಪಾಯದಿಂದ ಗೋಡೆಯ ತುದಿಯವರೆಗೆ ಇದ್ದವು. ಅಂಗಳದ ಸುತ್ತಲೂ ಇದ್ದ ಗೋಡೆಯನ್ನು ಸಹ ಶ್ರೇಷ್ಠವಾದ ಕತ್ತರಿಸಿದ ಕಲ್ಲುಗಳಿಂದ ಕಟ್ಟಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
Kannada BSI Bible 2016
ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದರು.
Kannada Bible (KNCL) BSI 2016
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅಸ್ತಿವಾರದ ಮೇಲಿನಿಂದ ಕಡೇ ವರಸೆಯವರೆಗೆ, ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ, ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ, ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು.