1 Kings 8:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.
Kannada Bible (KNCL) BSI 2016
“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,