1 Kings 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನೊಂದು ವಾಗ್ದಾನ ಮಾಡಿದ್ದೆ. ನೀನು ಆ ವಾಗ್ದಾನವನ್ನು ನೆರವೇರಿಸಿದೆ. ನಿನ್ನ ಬಾಯಿಂದಲೇ ನೀನು ಆ ವಾಗ್ದಾನವನ್ನು ಮಾಡಿದೆ. ನೀನು ನಿನ್ನ ಮಹಾಶಕ್ತಿಯಿಂದ ಆ ವಾಗ್ದಾನವನ್ನು ಇಂದು ನೆರವೇರುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
Kannada BSI Bible 2016
ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು.
Kannada Bible (KNCL) BSI 2016
ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.